ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಸಾಹಿತಿಗಳು, ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರಿಗೆ ನೋಟಿಸ್ ನೀಡಿರುವ ಕ್ರಮವನ್ನ ಖಂಡಿಸಿದರು.
ಈ ವೇಳೆ ಮಾತನಾಡಿದ ನಾಡೋಜ ಕುಂ.ವೀರಭದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ಗೆ ಗ್ರಹಣ ಬಡಿದಿದೆ. ಕಾನೂನು ಬಾಹಿರವಾಗಿ ಅನೇಕ ತಿದ್ದುಪಡಿ ಮಾಡುತ್ತಿದ್ದಾರೆ. ಪರಿಷತ್ ಕಾರ್ಯಚಟುವಟಿಕೆ ವಿಕೇಂದ್ರಿಕರಣ ಆಗಬೇಕು. ಆದರೆ ಮಹೇಶ್ ಜೋಶಿ ಅವರು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ತಮ್ಮ ನಿಲುವನ್ನು ಪ್ರಶ್ನಿಸುವವರನ್ನು ದಂಡಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಕ್ಷುಲ್ಲಕ ಕಾರಣಕ್ಕಾಗಿ ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ್ ಅವರ ಸದಸ್ಯತ್ವವನ್ನು ಏಕೆ ರದ್ದು ಮಾಡಬಾರದು ಎಂದು ನೋಟಿಸ್ ನೀಡಿದ್ದಾರೆ. ಹಾಗಾಗಿ ಸರ್ಕಾರ ತಕ್ಷಣವೇ ಈ ಬಗ್ಗೆ ಗಮನ ಹರಿಸಬೇಕು. ಜೋಶಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿ.ಡಿ.ಮಂಜುನಾಥ್, ಕೆ.ಪಿ.ಶ್ರೀಪಾಲ್, ಕೆ.ಎಲ್.ಅಶೋಕ್, ಹೊನ್ನಾಳಿ ಚಂದ್ರಶೇಖರ್ ಸೇರಿದಂತೆ ನೂರಾರು ಜನ ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.
C News TV Kannada News Online in cnewstv