Cnewstv | 07.06.2025 | ಮಂಡ್ಯ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಡಿಕೆ ಶಿವಕುಮಾರ್ ಕನಸಿನ ಯೋಜನೆಗೆ ಬೀಳುತ್ತಾ ಬ್ರೇಕ್ ???
ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಕನಸಿನ ಯೋಜನೆ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಗೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸದ್ಯ ಈ ವಿವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ತನಕ ತಲುಪಿದೆ.
ಮಂಡ್ಯದ ರೈತರು ಡಿಕೆಶಿ ವಿರುದ್ದ ತೊಡೆ ತಟ್ಟಿದ್ದು, ಯಾವುದೇ ಕಾರಣಕ್ಕೂ ಯೋಜನೆ ಅನುಷ್ಠಾನಕ್ಕೆ ಅವಕಾಶ ಕೊಡುವುದಿಲ್ಲ ಎಂದಿದ್ದಾರೆ. ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ಮಾಡಿಯೇ ಸಿದ್ಧ ಎಂದು ಡಿಕೆಶಿ ಹೇಳಿದ್ದರು. ರೈತದ ಸಾಕಷ್ಟು ವಿರೋಧದ ನಡುವೆಯೂ ಹಲವು ಸಭೆಗಳನ್ನು ಮಾಡಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗಿದೆ.
ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ವಿಚಾರವಾಗಿ ಶನಿವಾರ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಚಿವರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ರೈತರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ‘ಕಾವೇರಿ ಆರತಿ ಯಾಕೆ ಬೇಕು ಸರ್’ ಎಂದು ಸಭೆಯಲ್ಲಿ ರೈತರು ಒಕ್ಕೊರಲಿನಿಂದ ಚಲುವರಾಯಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ‘ನಿಮ್ಮದು ಹಠವಾದರೆ ನಮ್ಮದೂ ಹಠವೇ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ, ಕೊಪ್ಪ, ಮದ್ದೂರು ಭಾಗಗಳಲ್ಲಿರುವ ಕೆರೆಗಳನ್ನು ತುಂಬಿಸುವ ಕೆಲಸ ಜನಪ್ರತಿನಿಧಿಗಳ ಆದ್ಯತೆಯಾಗಬೇಕು. ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳ ಪೈಕಿ ಹಲವಾರು ಪಾಳುಬಿದ್ದಿವೆ. ಕೆಲಕಟ್ಟಡಗಳ ಸೀಲಿಂಗ್ ಕಳಚಿ ಬೀಳುವ ಸ್ಥಿತಿಯಲ್ಲಿದೆ. ಇದನ್ನೆಲ್ಲ ಯಾವಾಗ ನೋಡುತ್ತೀರಿ? ಕಾವೇರಿ ಆರತಿ ಬೇಕೆಂದು ರೈತರೇನಾದರೂ ಬಂದು ಕೇಳಿದ್ದರೇ? ಮೊದಲು ಸರ್ಕಾರಿ ಶಾಲೆಗಳನ್ನು ಸರಿಪಡಿಸಿ ಎಂದು ರೈತರು ಉಸ್ತುವಾರಿ ಸಚಿವರನ್ನು ಆಗ್ರಹಿಸಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಇದಿ…
C News TV Kannada News Online in cnewstv