Breaking News

ಅಭಿಮಾನಿಗಳ ಕ್ರೇಜ್ ಹೆಚ್ಚಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್…

Cnewstv | ಬೆಂಗಳೂರು | 24.08.2025 | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಅಭಿಮಾನಿಗಳ ಕ್ರೇಜ್ ಹೆಚ್ಚಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್…

ಬೆಂಗಳೂರು : ಅಭಿಮಾನಿಗಳ ಕ್ರೇಜ್ ಹೆಚ್ಚಿಸಿದ್ದ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್ ಮಾಡಲಾಗಿದೆ.

ನಟ ದರ್ಶನ್ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ‘ದಿ ಡೆವಿಲ್’ (The Devil) ಸಿನಿಮಾದ ಕೆಲಸಗಳನ್ನು ಮುಂದುವರಿಸಲು ಚಿತ್ರತಂಡ ತೀರ್ಮಾನಿಸಿದೆ. ಟೈಟಲ್ ಕಾರಣದಿಂದಲೇ ಈ ಹಾಡಿನ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಾಗಿತ್ತು. ಹಾಡು ಹೇಗಿರಬಹುದು ಎಂಬ ಕೌತುಕ ಬಹಳ ಇತ್ತು.

ಪ್ರಚಾರದ ಮೊದಲ ಹಂತವಾಗಿ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿನ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಮೊದಲೇ ಈ ಸಾಂಗ್ ರಿಲೀಸ್ ಆಗಿರಬೇಕಿತ್ತು. ಆದರೆ ದರ್ಶನ್​​ಗೆ ನೀಡಿದ್ದ ​ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಹಾಡಿನ ಬಿಡುಗಡೆಯನ್ನು ಮುಂದೂಡಲಾಗಿತ್ತು. ಆದರೆ ಈಗ ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಜನಪ್ರಿಯ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ‘ದಿ ಡೆವಿಲ್’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಪ್ರಕಾಶ್ ವೀರ್ ಅವರು ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ವಿಲನ’, ‘ತಾರಕ್’ ಮುಂತಾದ ಸಿನಿಮಾಗಳನ್ನು ಮಾಡಿದ್ದ ಅವರು ಈಗ ಪಕ್ಕಾ ಮಾಸ್ ಕಥೆಯನ್ನು ಪ್ರೇಕ್ಷಕರ ಎದುರು ತರಲು ಸಜ್ಜಾಗಿದ್ದಾರೆ. ದರ್ಶನ್ ಜೊತೆ ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಕೊನೆ ಹಂತದ ಕೆಲಸಗಳಲ್ಲಿ ಚಿತ್ರತಂಡ ತೊಡಗಿಕೊಂಡಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

Leave a Reply

Your email address will not be published. Required fields are marked *

*