Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಭದ್ರಾವತಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ. ವಿಡಿಯೋ ವೈರಲ್ …
ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆದ ಘಟನೆ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲ ಯುವಕರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುತ್ತಿರುವ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ.
ಸೋಮವಾರ ರಾತ್ರಿ 8 ಗಂಟೆಗೆ ಈದ್ ಮಿಲಾದ್ ಮೆರವಣಿಗೆ ನಡೆದಿದೆ.ಗಾಂಧಿ ವೃತದಲ್ಲಿ ಅಳವಡಿಸಲಾಗಿದ್ದ ಡಿಜೆ ಸೌಂಡಿಗೆ ಕುಣಿಯುವ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆನ್ನಲಾಗುವ 12 ಸೆಕೆಂಡ್ ನ ವಿಡಿಯೋ ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ವೈರಲ್ ಆಗಿದೆ.
ಘಟನೆ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡ ಭದ್ರಾವತಿಯ ಓಲ್ಡ್ ಟೌನ್ ಪೊಲೀಸರು ವಿಡಿಯೋ ಸತ್ಯಾಸತ್ಯತೆ ಜೊತೆಗೆ ಘೋಷಣೆ ಕೂಗಿದವರ ಶೋಧಕ್ಕೆ ಮುಂದಾಗಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
C News TV Kannada News Online in cnewstv