Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದೇ ಮೊದಲು ಶಿವಮೊಗ್ಗ ಅರಮನೆಯಲ್ಲಿ ಬೊಂಬೆ ಪ್ರದರ್ಶನ..
ಶಿವಮೊಗ್ಗ : ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಲ್ಲಿ (Palace) ಕಲಾ ದಸರಾಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಛಾಯಾಚಿತ್ರ ಪದರ್ಶನ, ಮಕ್ಕಳ ಪೇಂಟಿಂಗ್, ಬೊಂಬೆ ಪ್ರದರ್ಶನ ಮಾಡಲಾಗಿದೆ.
ಶಿವಮೊಗ್ಗದ ಛಾಯಾಗ್ರಾಹಕರು ತೆಗೆದ ಫೋಟೋಗಳನ್ನು ಪ್ರದರ್ಶಿಸಲಾಗಿದೆ. ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಛಾಯಾಚಿತ್ರಗಳನ್ನು ವೀಕ್ಷಿಸಿದರು.
ಅರಮನೆಯ ಮೇಲ್ಭಾಗದಲ್ಲಿ ಪೇಂಟಿಂಗ್ ಪ್ರದರ್ಶನ ಮಾಡಲಾಗಿದೆ. ಅರಮನೆ ಅವರಣದಲ್ಲಿ ರಾಧಿಕಾ ಜಗದೀಶ್ ಅವರು ದಸರಾ ಬೊಂಬೆಗಳ ಪ್ರದರ್ಶಿಸಿದ್ದಾರೆ. ಇದೇ ಮೊದಲ ಬಾರಿ ಗೊಂಬೆ ಪ್ರದರ್ಶನ ಮಾಡಲಾಗಿದೆ. ಪಟ್ಟದ ಗೊಂಬೆ, ಅರಿಷಿಣ ಕುಟ್ಟಿವ ಗೊಂಬೆ, ಅರಮನೆ, ಅಂಬಾರಿ, ಚನ್ನಪಟ್ಟಣ ಗೊಂಬೆಗಳು, ದಶಾವತಾರ, ಅಷ್ಟಲಕ್ಷ್ಮಿ , ನವದುರ್ಗೆ, ರಾಮಮಂದಿರ, ಕಾಡು, ವನ್ಯಜೀವಿಗಳು, ಪ್ರಾಣಿಗಳ ರಕ್ಷಣೆ, ಫೈಬರ್ ಸರ್ಪವನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಇದನ್ನು ನೋಡಿ..
C News TV Kannada News Online in cnewstv