Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದಸರಾ ಜಂಬೂ ಸವಾರಿಗೆ ಸುಸ್ವಾಗತ ಕೋರಿದ ವರುಣದೇವ..
ಶಿವಮೊಗ್ಗ : ಇಂದು ನಾಡಹಬ್ಬ ದಾಸರಾಗೇ ಚಾಲನೆ ಆರಂಭಕ್ಕೂ ಮುನ್ನವೇ ವರುಣದೇವ ಕೃಪೆ ತೋರಿದ್ದಾನೆ. ಕೋಟೆ ರಸ್ತೆಯ ಶಿವಪ್ಪ ನಾಯಕ ಅರಮನೆ ಮುಂಭಾಗ ನಂದಿ ಪೂಜೆಯ ನಂತರ ಮೆರವಣಿಗೆ ಆರಂಭವಾಯಿತು. ಅದಕ್ಕೂ ಮೊದಲು ವರುಣದೇವ ಕೃಪೆ ತೋರಿದಿದ್ದಾನೆ..
ಕೋಟೆ ಆಂಜನೇಯ ದೇವಸ್ಥಾನದ ಎದುರಿನ ಕಮಾನು ಪಕ್ಕದ ಅಟ್ಟಣಿಗೆಯ ಮೇಲೆ ನಿಂತು ಅಂಬಾರಿ ಮೇಲಿದ್ದ ಚಾಮುಂಡೇಶ್ವರಿ ದೇವಿಗೆ ಹೂವು ಅರ್ಪಿಸಿದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಜಿಲ್ಲೆಯ ಜನರ ಪರವಾಗಿ ದೇವರಿಗೆ ಗೌರವ ಸಮರ್ಪಿಸಿದರು. ಈ ವೇಳೆ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಸಿಇಒ ಎನ್.ಹೇಮಂತ್, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಚಾಮುಂಡೇಶ್ವರಿಗೆ ಹೂ ಸಮರ್ಪಿಸಿದರು.
ಮಧ್ಯಾಹ್ನ 2.30ಕ್ಕೆ ಜಂಬೂ ಸವಾರಿ ಹೊರಡಬೇಕಿತ್ತು. ಆದರೆ ಮಳೆಯ ಕಾರಣ ತಡವಾಯಿತು. 3 ಗಂಟೆಗೆ ಆರಂಭವಾಯಿತು. 650 ಕೆ.ಜಿ ತೂಕದ ಬೆಳ್ಳಿಯ ಮಂಟಪ ಹಾಗೂ ಚಾಮುಂಡೇಶ್ವರಿಯ ಪುತ್ಥಳಿಯನ್ನು ಬೃಹತ್ ಕ್ರೇನ್ ಬಳಸಿ ಆನೆ ಸಾಗರನ ಬೆನ್ನಿನ ಮೇಲೆ ಪ್ರತಿಷ್ಠಾಪಿಸಲಾಯಿತು.
ಸಾಗರನ ಜೊತೆ ಆನೆಗಳಾದ ಬಹದ್ಧೂರ್ ಹಾಗೂ ಬಾಲಣ್ಣ ಹೆಜ್ಜೆ ಹಾಕಿದವು. ಸ್ವತಃ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನಕೃಷ್ಣ ಪಟಗಾರ ನೇತೃತ್ವದಲ್ಲಿ ಆನೆಗಳನ್ನು ಮೆರವಣಿಗೆಗೆ ಸಿದ್ಧಗೊಳಿಸಲಾಯಿತು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv