Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ.
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಶಿವಮೊಗ್ಗ ಹಾಗೂ ಎನ್‌ಎಸ್‌ಎಸ್ ಘಟಕಗಳು ಶಿವಮೊಗ್ಗ ಇವರ ಸಹಯೋಗದಲ್ಲಿ ಅ.15 ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ 2025-26 ನೇ ಶಿವಮೊಗ್ಗ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಸಿದ್ದರಾಮಯ್ಯರವರ ಘನ ಉಪಸ್ಥಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ.
ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಭದ್ರಾವತಿ ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಶಾಸಕ ಬಿ.ಕೆ.ಸಂಗಮೇಶ್ವ, ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾಧಿಕಾರಿ, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಜಾನಪದ ಗುಂಪು ನೃತ್ಯ, ಜಾನಪದ ಗೀತೆಗಳು, ಕಥೆ ಬರೆಯುವುದು, ಚಿತ್ರಕಲೆ, ಭಾಷಣೆ ಹಾಗೂ ಕವಿತೆ ಬರೆಯುವ ಸ್ಫರ್ದೆಗಳನ್ನು ಆಯೋಜಿಸಲಾಗಿದೆ.
ಇದನ್ನು ಒದಿ..
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv