Breaking News

ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​..

Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​..

ಬೆಂಗಳೂರು : ಮೊಂತಾ ಚಂಡಮಾರುತದ ಹಿನ್ನಲೆ ರಾಜ್ಯದಲ್ಲಿ ವರುಣನ ಆರ್ಭಟ (Weather Forecast) ಮುಂದುವರೆಯಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮಳೆಯಾಗುವ ಸಾರ್ಧಯತೆಗಳು ಹೆಚ್ಚಿದ್ದು, ಉತ್ತರ ಕನ್ನಡ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕೀಮೀ ನಿರಂತರ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರನ ಮಳೆಯಾಗಲಿದ್ದು, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

Leave a Reply

Your email address will not be published. Required fields are marked *

*