Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ.
ಶಿವಮೊಗ್ಗ,ಅಕ್ಟೋಬರ್.28(ಕರ್ನಾಟಕ ವಾರ್ತೆ): ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಆಯನೂರು ಹಾಗೂ ನಿದಿಗೆ-1 ರ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು 45 ವರ್ಷ ಮೀರಿರಬಾರದು. ಕೃಷಿ ಮತ್ತು ಕೃಷಿ ಸಂಬAಧಿತ ಇಲಾಖೆಯಲ್ಲಿ 1 ವರ್ಷ ಸೇವಾನುಭವ ಹೊಂದಿರಬೇಕು. ಕೃಷಿ ಅಥವಾ ಕೃಷಿ ಸಂಬAಧಿತ ವಿಷಯದಲ್ಲಿ ಪದವಿ/ಸ್ನಾತಕ್ಕೋತ್ತರ ಪದವಿಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪದವಿ/ಸ್ನಾತಕ್ಕೋತ್ತರ ಪದವಿಯ ಅಂತಿಮ ಅಂಕಪಟ್ಟಿ, ಪರಿಶಿಷ್ಟ ಜಾತಿ/ಪಂಗಡ ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ದಾಖಲಾತಿಗಳನ್ನು ಹೊಂದಿರಬೇಕು.
ನಿಗದಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೇವಾ ಅನುಭವ ಪ್ರಮಣ ಪತ್ರ, ಕೆಲಸ ನಿರ್ವಹಿಸಿದ ಸಂಸ್ಥೆಯು ನೀಡಿದ ಪ್ರಮಾಣ ಆದೇಶ ಪತ್ರ, ಕೆಲಸ ನಿರ್ವಹಿಸಿದ ಅವಧಿಗೆ ಸಂಬಂಧಪಟ್ಟ ಸಂಸ್ಥೆಯಿAದ ಹಾಜರಾತಿ ಪ್ರಮಾಣ ಪತ್ರ, ಸಂಸ್ಥೆಯಿAದ ವೇತನ ದೃಢೀಕರಣ ಹಾಗೂ ವೇತನ ಜಮಾ ಆದ ಕುರಿತು ಬ್ಯಾಂಕ್ ಖಾತೆಯ ವಿವರಗಳನ್ನು ಲಗತ್ತಿಸಿ ನ.14 ರೊಳಗಾಗಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-221906 ನ್ನು ಸಂಪರ್ಕಿಸುವುದು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv