Breaking News

ಏ. 23 ಮತ್ತು‌ 24 CET ಪರೀಕ್ಷೆ : 3.3 ಲಕ್ಷ ಅಭ್ಯರ್ಥಿಗಳು ನೋಂದಣಿ.. 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ.

Cnewstv | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಏ. 23 ಮತ್ತು‌ 24 CET ಪರೀಕ್ಷೆ : 3.3 ಲಕ್ಷ ಅಭ್ಯರ್ಥಿಗಳು ನೋಂದಣಿ; 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ.

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (CET)ನಾಳೆ ಗುರುವಾರ ಮತ್ತು ನಾಡಿದ್ದು ಶುಕ್ರವಾರ ನಡೆಯಲಿದ್ದು, ಒಟ್ಟು 3,30,479 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಇದರಲ್ಲಿ 1,44,380 ವಿದ್ಯಾರ್ಥಿಗಳು ಮತ್ತು 1,86,099 ವಿದ್ಯಾರ್ಥಿನಿಯರು ಸೇರಿದ್ದಾರೆ.

ಈ ಬಾರಿ ಮೊದಲ ಬಾರಿಗೆ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ವಸ್ತ್ರಸಂಹಿತೆ ಪಾಲನೆ ನೋಡಿಕೊಳ್ಳಲು ಡ್ರೆಸ್ ಕೋಡ್ ಅಧಿಕಾರಿ ನೇಮಕ ಮಾಡಲಾಗಿದೆ. ರಾಜ್ಯಾದ್ಯಂತ ಒಟ್ಟು 745 ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವಿದ್ಯಾರ್ಥಿಗಳು ಅರ್ಧತೋಳು ಉಡುಪು ಧರಿಸಬೇಕು ಮತ್ತು ಕಾಲರ್ ಇಲ್ಲದ ಬಟ್ಟೆಗಳನ್ನು ಧರಿಸುವುದು ಉತ್ತಮ ಎಂದು ಸೂಚಿಸಲಾಗಿದೆ. ಗಂಡುಮಕ್ಕಳು ಜೇಬಿಲ್ಲದ ಸರಳ ಪ್ಯಾಂಟ್ ಧರಿಸಲು ಅನುಮತಿ ಇದೆ. ಕುರ್ಥಾ-ಪೈಜಾಮಾ, ಜೀನ್ಸ್ ಹಾಗೂ ಶೂಗಳನ್ನು ನಿಷೇಧಿಸಲಾಗಿದೆ.

ಒಟ್ಟು 970 ವಿಶೇಷ ಚೇತನ ಮಕ್ಕಳು ಸಿಇಟಿ ಬರೆಯುತ್ತಿದ್ದು, ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶ್ರವಣ ಸಾಧನ ಬಳಸಿಕೊಂಡು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕಾಗಿರುವ ಕಾರಣ ಅಂತಹವರು ಎರಡು ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಬರಬೇಕೆಂದು ಅವರು ಸಲಹೆ ನೀಡಿದ್ದಾರೆ.

ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಕೂಡ ಅಳವಡಿಸಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ನಿಗಾ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು‌ ಒದಿ‌..

Leave a Reply

Your email address will not be published. Required fields are marked *

*