Breaking News

ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಪುಲ್ವಾಮಾ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಹತ್ಯೆಯಾದ ಮೂವರು ಭಯೋತ್ಪಾದಕರೂ ತೆಹ್ರಿಕ್ ಉಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರೆಂಬುದು ತಿಳಿದುಬಂದಿದೆ. ಕಾಶ್ಮೀರ: ಎನ್ ಕೌಂಟರ್ ದಾಳಿಯಲ್ಲಿ ಮೂವರು ಉಗ್ರರ ಹತ್ಯೆ ಬುಧವಾರವಷ್ಟೇ ಶ್ರೀನಗರದಲ್ಲಿ ನಡೆದಿದ್ದ ಎನ್ ಕೌಂಟರ್ ದಾಳಿಯಲ್ಲಿ ಮೂವರು ಉಗ್ರರನ್ನು ಸದೆಬಡಿಯುವಲ್ಲಿ ಸೇನೆ ಯಶಸ್ವಿಯಾಗಿತ್ತು. ಈ ಸಂದರ್ಭದಲ್ಲಿ ಉಗ್ರರು ನಡೆಸಿದ ಪ್ರತಿದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದರು.ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಮನನ್ ಬಶಿರ್ ವಾನಿ ಮತ್ತು ಇನ್ನೋರ್ವ ಮೋಸ್ಟ್ ವಾಂಟೆಡ್ ಭಯೋತ್ಪಾದಕನನ್ನು ಇತ್ತೀಚೆಗಷ್ಟೇ ಭಾರತೀಯ ಸೇನೆ ಹತ್ಯೆಗೈದಿತ್ತು. ಈ ಹತ್ಯೆಯ ನಂತರ ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆ ಮತ್ತಷ್ಟು ಹೆಚ್ಚಾಗಿದೆ.

ಕೃಪೆ; ಒನ್ ಇಂಡಿಯ಻

Leave a Reply

Your email address will not be published. Required fields are marked *

*