Breaking News

ಗದುಗಿನ ತೋಂಟದಾರ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನ

  • ಗದುಗಿನ ತೋಂಟದಾರ್ಯ ಸಿದ್ಧಲಿಂಗ ಮಹಾಸ್ವಾಮಿಗಳು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ನೆನ್ನೆ   ಹೃದಯಾಘಾತಕ್ಕೆ ಒಳಗಾಗಿದ್ದರು ಅವರನ್ನು ಗದಗಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ತೋಂಟದಾರ್ಯ ಸಿದ್ಧಲಿಂಗ ಮಹಾಸ್ವಾಮಿಗಳು ತೋಂಟದಾರ್ಯ ಮಠದ 19ನೇ ಪೀಠಾಧಿಪತಿಯಾಗಿದ್ದರು. 1994ರಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ, 1995ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಇವರಿಗೆ ಲಭಿಸಿತು. 60ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದರು.
ತೋಂಟದಾರ್ಯ ಸ್ವಾಮೀಜಿ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

*