ಶಿವಮೊಗ್ಗ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ. ಭಾನುಪ್ರಕಾಶ್ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು, ರಾಜ್ಯ ಉಪಾಧ್ಯಕ್ಷ ಸ್ಥಾನವನ್ನು ಇಂದಿಗೂ ನಾನು ಒಪ್ಪಿಕೊಂಡಿಲ್ಲ. ಇದ್ದಕ್ಕಿದ್ದಂತೆ ಒಂದೂವರೆ ವರ್ಷದ ಹಿಂದೆ ನನ್ನನ್ನು ರಾಜ್ಯ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ರು. ಇದೀಗ ಚುನಾವಣೆ ಬರುತ್ತಿದ್ದಂತೆ ಮತ್ತೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಹೀಗಾಗಿ ನಾನು ರಾಜ್ಯ ಉಪಾಧ್ಯಕ್ಷ ಸ್ಥಾನವನ್ನು ಒಪ್ಪಿಕೊಂಡಿಲ್ಲ.ಯಡಿಯೂರಪ್ಪ ಅವರು ಸರ್ಕಾರ ಉಳಿಸಬಹುದು ಹಾಗೆಯೇ ಕೆಡವಬಹುದು. ಆದ್ರೆ, ಮನಸುಗಳನ್ನು ಕಟ್ಟಲು ಆಗುವುದಿಲ್ಲ ನನ್ನ ಸೈದ್ದಾಂತಿಕ ನಿಲುವು ಹಾಗೂ ನನ್ನ ಮನಸಾಕ್ಷಿ ಒಪ್ಪುವುದಿಲ್ಲ. ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿಯೇ ಉಳಿಯುತ್ತೇನೆ.
ಬಿ.ವೈ.ರಾಘವೇಂದ್ರ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ. ರಾಘವೇಂದ್ರ ಅವರು ಗೆಲ್ಲಬೇಕು ಎಂಬುದು ನನಗೂ ಇದೆ. ಇನ್ನೂ ಯಡಿಯೂರಪ್ಪ ಅವರಿಗೆ ಅವರ ವರ್ತನೆ ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದವರನ್ನೇ ಕೆಟ್ಟವರನ್ನಾಗಿ ಮಾಡಿದ್ದಾರೆ. ಸೊಗಡು ಶಿವಣ್ಣ, ಶಿವಯೋಗಿ ಸ್ವಾಮಿ, ಗಿರೀಶ್ ಪಟೇಲ್ ಸೇರಿದಂತೆ ಹಲವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡದೆ, ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದ್ರು. ಪಕ್ಷಕ್ಕೆ ಹೊಸಬರನ್ನು ಕರೆದುಕೊಂಡು ಬರುವ ಜೊತೆಗೆ ನಮ್ಮ ಪಕ್ಷದಲ್ಲೇ ಹತ್ತಾರು ವರ್ಷ ಕೆಲಸ ಮಾಡಿ ಪಕ್ಷದಿಂದ ಹೊರಗಿರುವವರನ್ನು ಮೊದಲು ಪಕ್ಷಕ್ಕೆ ಕರೆತರಬೇಕು ಎಂದು ಆಗ್ರಹಿಸಿದ್ರು.. ಇನ್ನೂ ಸುದ್ದಿ ಗೋಷ್ಟಿ ಯಲ್ಲಿ ಕ್ರೀಡಾ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷ ಗಿರೀಶ್ ಪಟೇಲ್ ಮತ್ತಿತರರು ಉಪಸ್ಥಿತರಿದ್ದರು..
C News TV Kannada News Online in cnewstv