Breaking News

ಟಿಪ್ಪು ಜಯಂತಿಗೆ ತಯಾರಾದ ಜಿಲ್ಲಾಡಳಿತ

ಸದ್ಯ ಶಿವಮೊಗ್ಗದಲ್ಲಿ ಹಾಟ್ ಸುದ್ದಿಯಾಗಿರುವುದು ಟಿಪ್ಪು ಜಯಂತಿ. ಜಿಲ್ಲಾಡಳಿತ ರಾಜ್ಯ ಸರ್ಕಾರದ ಸೂಚನೆಯಂತೆ ಟಿಪ್ಪು ಜಯಂತಿಯನ್ನು ನಾಳೆ ನಗರದ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಗುತ್ತಿದೆ . ಇದಕ್ಕೆ ಪ್ರೊಟೋಕಾಲ್ ಪ್ರಕಾರ ಜನಪ್ರತಿನಿಧಿಗಳಿಗೆ ಆಹ್ವಾನವನ್ನು ನೀಡಲಾಗಿದೆ.ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಟಿಪ್ಪು ಜಯಂತಿ ಆಚರಣೆಯ ಬಗ್ಗೆ ವಿರೋಧವಿರುವ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿದೆ.ಜಯಂತಿಯಲ್ಲಿ ವೇದಿಕೆ ಕಾರ್ಯಕ್ರಮ ಮಾತ್ರ ಇದ್ದು, ಯಾವುದೇ ರೀತಿಯ ಮೆರವಣಿಗೆ ಇರುವುದಿಲ್ಲ .ರಂಗಮಂದಿರದೊಳಗೆ ಪ್ರವೇಶಿಸಲು ಪಾಸ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆಎ ದಯಾನಂದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

*