Breaking News

ಅನಂತ ಅಮರ.‌

 

ಅನಂತಕುಮಾರ್ ಜೀವನ ಹಾಗೂ ನಡೆದು ಬಂದ ಹಾದಿಯ ಕಿರು ಪರಿಚಯ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅನಂತ ಕುಮಾರ್ ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಸೇವೆಗಳು ಹಾಗೂ ಸಾರ್ವಜನಿಕ ಕಾರ್ಯಗಳು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿವೆ. ಅನಂತ ಕುಮಾರ್ ಹುಟ್ಟಿದ್ದು
22ನೆಜುಲೈ 1959 ರಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ. ತಂದೆ ನಾರಾಯಣ ಶಾಸ್ತ್ರಿ ಮತ್ತು ತಾಯಿ ಗಿರಿಜ ಎನ್ ಶಾಸ್ತ್ರಿ.
ಅನಂತಕುಮಾರ್ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸೇರಿದ ಹುಬ್ಬಳ್ಳಿಯ ಕೆ ಎಸ್ ಆರ್ಟ್‌ಸ್ ಕಾಲೇಜಿನ ಕಲಾ ವಿಭಾಗದಲ್ಲಿ ಪಧವೀಧರರಾಗಿ, ನಂತರ ಮೈಸೂರು ವಿಶ್ವವಿದ್ಯಾಲಯಕ್ಕೆ ಸೇರಿದ ಜೆ.ಎಸ್.ಎಸ್. ಲಾ ಕಾಲೇಜಿನಲ್ಲಿ ಕಾನೂನು ಪದವೀಧರರಾದರು. ಅನಂತ ಕುಮಾರ್ ಪತ್ನಿ ತೇಜಸ್ವಿನಿ. ಐಶ್ವರ್ಯ ಮತ್ತು ಕುಮಾರಿ ವಿಜೇತ ಎಂಬ ಎರಡು ಮಕ್ಕಳಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸದ್ಯ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿ ಅವರು ಕಾರ್ಯ ನಿರ್ವಹಿಸ್ತಿದ್ರು. .ರಾಷ್ಟ್ರೀಯತೆಯಲ್ಲಿ ನಂಬಿಕೆಯೆಂದರೆ ಸುಸಂಸ್ಕೃತಿಯ ಬಗೆಗಿನ ಗೌರವವೂ ಹೌದು ಎಂಬುದನ್ನು ಪ್ರಕಟಿಸಿದ ಅನಂತಕುಮಾರ್ ವಿಶ್ವ ಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿದ ಪ್ರಪ್ರಥಮ ಕನ್ನಡಿಗ ಎಂಬ ಖ್ಯಾತಿಗೆ ಪಾತ್ರರಾಗಿದ್ದರು..ರಾಷ್ಟ್ರೀಯತೆಯ ನಂಬಿಕೆಯಿಂದ ಆಕರ್ಷಿತರಾಗಿ ಮತ್ತು ತಾಯ್ನಾಡಿನ ಪ್ರೇಮದಿಂದ ಸಾಮಾಜಿಕ ಜೀವನಕ್ಕೆ ಕಾಲಿಟ್ಟು ಜನಸೇವೆಯನ್ನು ಮಾಡಲು ಹಂಬಲಿಸುತ್ತಿದ್ದಾಗ ಅವರು ಅದನ್ನು ನನಸಾಗಿಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ್ನು ಆರಿಸಿಕೊಂಡರು. ಎಬಿವಿಪಿ ಯಲ್ಲಿ ಪ್ರಮುಖ ಸ್ಥಾನದಲ್ಲಿದ್ದ ಅವರು ಮುಂದೆ ಕರ್ನಾಟಕದ ಅತ್ಯಂತ ಪ್ರಭಾವೀ ವಿದ್ಯಾರ್ಥಿ ನಾಯಕರೂ ಆಗಿದ್ದರು.ಆಗಿನ ಇಂದಿರಾ ಗಾಂಧಿಯವರ ಸರ್ಕಾರ ಭಾರತದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದರ ವಿರುದ್ಧ ಹೋರಾಡಿದ ಅನಂತಕುಮಾರರು ಜೈಲುವಾಸವನ್ನೂ ಅನುಭವಿಸಬೇಕಾಯಿತು. ತಮ್ಮ ಸಂಘಟನಾ ಕೌಶಲ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಅನಂತಕುಮಾರ್ ಎಬಿವಿಪಿಯ ರಾಜ್ಯ ಕಾರ್ಯದರ್ಶಿಯಾಗಿ ಮತ್ತು 1985ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಜವಾವ್ದಾರಿಯನ್ನು ನಿರ್ವಹಿಸಿದ್ದಾರೆ. 1987ರಲ್ಲಿ ರಾಜಕಾರಣದ ಉನ್ನತ ಹಂತಕ್ಕೇರಲು ನಿರ್ಧರಿಸಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದರು. ಕರ್ನಾಟಕದ ಭಾರತೀಯ ಜನತಾ ಯುವ ಮೋರ್ಚದ ಅಧ್ಯಕ್ಷರಾಗಿ ಅವರದ್ದು ಮೊದಲ ಜವಾಬ್ದಾರಿಯಾಗಿತ್ತು. 1995 ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡರು. 1996 ರಲ್ಲಿ ಮೊದಲ ಬಾರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿಯೂ ಆಯ್ಕೆಯಾದರು. ಆ ಸಂದರ್ಭದಲ್ಲಿ ರೈಲ್ವೆ ಮತ್ತು ಕೈಗಾರಿಕೆ ಸಚಿವಾಲಯಗಳ ವಿವಿಧ ಸಮಿತಿಗಳ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದರು.
1998 ರಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಸಂಪುಟದಲ್ಲಿ ವಿಮಾನಯಾನ ಖಾತೆಯ ಸಚಿವರಾಗಿ ಈಗಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರಕಾರದೊಂದಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದರು. ಈ ಒಡಂಬಡಿಕೆಯ ಕಾರಣದಿಂದಾಗಿಯೇ ವಿಮಾನ ನಿಲ್ದಾಣದ ಯೋಜನೆ ಅಸ್ತಿತ್ವಕ್ಕೆ ಬಂದಿತು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದರು. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಉಂಟಾದ ಗೊಂದಲದ ಸಮಯದಲ್ಲಿ ಅನಂತ ಕುಮಾರ್ ಸಿಎಂ ರೇಸ್​ನಲ್ಲೂ ಇದ್ದರು.1999 ರಲ್ಲಿ ಎನ್ ಡಿ ಎ ಸರಕಾರದ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಮುಖ ಖಾತೆಗಳಾದ, ಪ್ರವಾಸೋದ್ಯಮ, ಕ್ರೀಡೆ ಮತ್ತು ಯುವಜನ ವ್ಯವಹಾರಗಳು, ಸಂಸ್ಕೃತಿ ಮತ್ತು ನಗರಾಭಿವೃದ್ಧಿ ಹಾಗೂ ಬಡತನ ನಿರ್ಮೂಲನ ಮುಂತಾದ ಖಾತೆಗಳ ಸಚಿವರಾಗಿ ಕಾರ್ಯ ನಿರ್ವಹಿಸಿದರು.ಸರಳ ಸಜ್ಜನಿಕೆಯ ಅನಂತ ಈಗ ಕೇವಲ ನೆನಪು ಮಾತ್ರ.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments