Breaking News

ಗಾಂಜಾ ಮತ್ತಿನಲ್ಲಿ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಯುವಕರು.

ಗಾಂಜಾ ಮತ್ತಿನಲ್ಲಿದ್ದ ಇಬ್ಬರು ಯುವಕರು ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಪೇದೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಸಿ ‍ ಪೊಲೀಸ್ ಠಾಣೆ ಪೇದೆ ಮಂಜುನಾಥ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇಬ್ಬರು ಯುವಕರು ಇವರ ಬಳಿ ಹಣವನ್ನು ಕೇಳಿದ್ದಾರೆ ಹಣ ನೀಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಯುವಕರು ಮಂಜುನಾಥರವರ ಕೈಕಾಲು ಕುತ್ತಿಗೆ ಭಾಗಕ್ಕೆ ಬ್ಲೇಡಿನಲ್ಲಿ ಕೊಯ್ದಿದ್ದಾರೆ. ಜನ ಸೇರುತ್ತಿದ್ದಂತೆ ಇಬ್ಬರೂ ಯುವಕರು ಸ್ಥಳದಿಂದ ಪರಾರಿ ಆಗಿದ್ದಾರೆ. ತಕ್ಷಣ ಗಾಯಗೊಂಡ ಮಂಜುನಾಥ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತ್ಯಕ್ಷದರ್ಶಿಗಳ ಸಹಾಯದಿಂದ ಹಲ್ಲೆ ನಡೆಸಿದ ಯುವಕರನ್ನು ಆಟೋ ಚಾಲಕ ನದೀಂ ಹಾಗೂ ನಜೀರ್ ಎಂದು ಗುರುತಿಸಿ, ಇಬ್ಬರನ್ನು ವಶಕ್ಕೆ ಪಡೆದು, ದೊಡ್ಡಪೇಟೆ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

*