Breaking News

ಹತ್ತು ವರ್ಷಗಳ ನಂತರ ಮತ್ತೆ ಆರಂಭವಾಗಲಿರುವ ಸಹ್ಯಾದ್ರಿ ಉತ್ಸವದ ಲಾಂಚನ ಅನಾವರಣ.

10ವರ್ಷಗಳ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಸಹ್ಯಾದ್ರಿ ಉತ್ಸವವನ್ನು ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಮೊದಲ ಹೆಜ್ಜೆಯಾಗಿ ಲಾಂಚನ ಹಾಗೂ ಘೋಷ ವಾಕ್ಯವನ್ನು ಇಂದು ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ್ ಅನಾವರಣಗೊಳಿಸಿದ್ದರು. ಹಳೆ ಜೈಲು ಆವರಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು,ಲಭ್ಯವಿರುವ ಅನುದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಹ್ಯಾದ್ರಿ ಉತ್ಸವವನ್ನು ಆಯೋಜಿಸಲು ಸಿದ್ಧತೆಗಳನ್ನು ಮಾಡಲಾಗಿದೆ. ರಾಷ್ಟ್ರ,ರಾಜ್ಯಮಟ್ಟದ ಹಾಗೂ ಸ್ಥಳೀಯ ಕಲಾವಿದರಿಗೆ ಉತ್ಸವದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನೀಡಲು ಅವಕಾಶ ನೀಡಲಾಗುತ್ತಿದೆ. ಉತ್ಸವ ಆಚರಣೆಯಿಂದ ಕಲಾವಿದರಿಗೆ ಆರ್ಥಿಕ ಸಹಾಯ ಸಿಗುವುದು ಮಾತ್ರವಲ್ಲದೆ ಸ್ಥಳೀಯ ಕಲೆಗಳಿಗೆ ಪ್ರೋತ್ಸಾಹ ನೀಡಲು ಸಾಧ್ಯವಿದೆ. ಸಾಹಸ ಕ್ರೀಡೆಗಳು, ಜನಪದ ಕ್ರೀಡೆಗಳು, ಮ್ಯಾರಥಾನ್, ಪಾರಂಪರಿಕ ನಡಿಗೆಯಂತಹ ವೈವಿಧ್ಯಮಯ ಕಾರ್ಯಕ್ರಮಗಳು ಸಹ ನಡೆಯಲಿವೆ. ಸಾಂಸ್ಕøತಿಕ ಕಾರ್ಯಕ್ರಮಗಳು ಮಾತ್ರವಲ್ಲದೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವಂತಹ ಕಾರ್ಯಕ್ರಮಗಳನ್ನು ಸಹ ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

*