Breaking News

ಯುವಕನಿಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ

ಯುವಕನಿಗೆ ಬಿಯರ್ ಬಾಟಲಿಯಿಂದ ತಲೆ ಹಿಂಭಾಗ ಹೊಡೆದು ಹಲ್ಲೆ ನಡೆಸಿರುವ ಘಟನೆ
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪ ಗ್ರಾಮದ ಮಾರ್ಗದಲ್ಲಿ ನಡೆದಿದೆ. ಗಾಯಗೊಂಡಿರುವ ವ್ಯಕ್ತಿ ಜ್ಯೋತಿ ನಗರದ ನಿವಾಸಿ ಮೆಕ್ಯಾನಿಕ್ ಮಂಜುನಾಥ್.. ಲಕ್ಕಿನಕೊಪ್ಪ ಗ್ರಾಮದ ಮಾರ್ಗದಲ್ಲಿ ನಡೆದುಕೊಂಡು ಹೋಗುವ ವೇಳೆ ನಾಲ್ಕೈದು ಜನ ಯುವಕರು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಮೊದಲು ಮಂಜುನಾಥನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಂತರ ತಲೆಗೆ, ಮುಖಕ್ಕೆ ಬಲವಾಗಿ ಹೊಡೆದ ಪರಿಣಾಮ ತೀವ್ರ ರಕ್ತ ಸ್ರಾವವಾಗಿದೆ. ಕೂಡಲೇ ತೀವ್ರವಾಗಿ ಗಾಯಗೊಂಡ ಮಂಜುನಾಥ್ ಅವರನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

*