ಶಿವಮೊಗ್ಗ-ಬೆಂಗಳೂರು ನಡುವೆ ಜನ ಶತಾಬ್ದಿ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದ್ದು, ಫೆಬ್ರವರಿ 3ರಂದು ರೈಲು ಸಂಚಾರ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಜನ ಶತಾಬ್ದಿ ರೈಲು ವಾರದಲ್ಲಿ ನಾಲ್ಕು ದಿನ ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸಲಿದೆ. ಜನ ಶತಾಬ್ದಿ ರೈಲು ಸೋಮವಾರ, ಬುಧವಾರ, ಶುಕ್ರವಾರ ಶಿವಮೊಗ್ಗ-ಬೆಂಗಳೂರು ನಡುವೆ ಸಂಚಾರ ನಡೆಸಲಿದೆ. ಶನಿವಾರ ಬೆಳಗ್ಗೆ ಶಿವಮೊಗ್ಗದಿಂದ ಹೊರಡುವ ರೈಲು ಭಾನುವಾರ ಸಂಜೆ ಬೆಂಗಳೂರಿನಿಂದ ಹೊರಡಲಿದೆ.ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ತನಕ ಸಂಚಾರ ನಡೆಸುತ್ತದೆ. 14 ಬೋಗಿಯ ರೈಲಿನಲ್ಲಿ 7 ಎಸಿ ಕೋಚ್ ಗಳಿವೆ.
ವೇಳಾಪಟ್ಟಿ ಮತ್ತು ನಿಲ್ದಾಣಗಳು : ಶಿವಮೊಗ್ಗದಿಂದ ಬೆಳಗ್ಗೆ 5.30ಕ್ಕೆ ಹೊರಡುವ ರೈಲು 10 ಗಂಟೆಗೆ ಬೆಂಗಳೂರು ತಲುಪಲಿದೆ. ಬೆಂಗಳೂರಿನಿಂದ ಸಂಜೆ 5.30ಕ್ಕೆ ಹೊರಡುವ ರೈಲು 10.30 ಕ್ಕೆ ತಲುಪಲಿದೆ… ಜನ ಶತಾಬ್ದಿ ರೈಲು ಭದ್ರಾವತಿ, ತರೀಕೆರೆ, ಕಡೂರು, ಬೀರೂರು, ಅರಸೀಕೆರೆ, ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
Recent Comments