ಮಂಗನ ಕಾಯಿಲೆ ಯಿಂದ ತತ್ತರಿಸಿದ ಸಾಗರದ ಅರಳಗೋಡು ಗ್ರಾಮಪಂಚಾಯಿತಿ ವ್ಯಾಪ್ತಿಯ ವಾಟಮಕ್ಕಿ ಗ್ರಾಮದಲ್ಲಿ ಕೃಷ್ಣಪ್ಪ ಎಂಬ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ಕಳೆದ ನಾಲ್ಕು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕೃಷ್ಣಪ್ಪ, ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬರುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.