Breaking News

ಆಡಿಯೋ ಹಗರಣ ಕುರಿತು ತನಿಖೆ ನಡೆಸಬೇಕು- ಯುವ ಕಾಂಗ್ರೆಸ್

ಯಡಿಯೂಪ್ಪ ಅವರ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯಿಂದ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಯಿತು.

ವಿಧಾನಸಭಾಧ್ಯಕ್ಷರನ್ನೇ ಬುಕ್ ಮಾಡಿದ್ದೇವೆ ಎಂದು ಬಿಜೆಪಿ ನಾಯಕರು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ. ಶಾಸಕರಿಗೆ ಹತ್ತು ಕೋಟಿ ರೂಪಾಯಿ ಆಮಿಷ ಒಡ್ಡುತ್ತಿರುವ ಆಡಿಯೋ ಮತ್ತು ನ್ಯಾಯಾಧೀಶರನ್ನೇ ಬುಕ್ ಮಾಡಿದ್ದೇವೆ ಎನ್ನುವ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯ ಸರ್ಕಾರವನ್ನು ಬೀಳಿಸಲು ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ವಾಮಮಾರ್ಗದಲ್ಲಿ ಪ್ರಯತ್ನಿಸುತ್ತಿದ್ದಾರೆ. ಪ್ರಜಾತಂತ್ರ ವ್ಯವಸ್ಥೆ ಹಾಳು ಮಾಡುತ್ತಿರುವ ಹಾಗೂ ನ್ಯಾಯಾಂಗ ವ್ಯವಸ್ಥೆಯನ್ನೇ ಅಣಕವಾಡುವಂತೆ ಮಾಡಿರುವ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದರು..

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕೆಪಿಸಿಸಿ ಕಾರ್ಯದರ್ಶಿಗಳಾದ ಹೆಚ್.ಸಿ. ಯೋಗೀಶ್ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕೆ ರಂಗನಾಥ್, ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್ ಪಿ ಗಿರೀಶ್ , ಆರ್. ಕಿರಣ್ ಟಿ.ವಿ ರಂಜಿತ್ , ಡಿ ಆರ್ ಗಿರೀಶ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

*