ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಚುನಾವಣಾ ಆಯೋಗದ ಸುದ್ದಿಗೋಷ್ಠೀಯಲ್ಲಿ 17ನೆಯ ಲೋಕಸಭಾ ಚುನಾವಣೆಯ ವೇಳಪಟ್ಟಿ ಘೋಷಣೆ ಮಾಡಿದ್ದು, 7 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದರು.
ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23 ರಂದು ಎರಡು ಹಂತದ ಮತದಾನ. ಮೇ 23ಕ್ಕೆ ಫಲಿತಾಂಶ ಪ್ರಕಟಣೆ.
ಈಗಿನ ನಿಂದಲೇ ದೇಶದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗ ಪಾಲಿಸಬೇಕು. ರಾಜ್ಯ ಹಾಗೂ ಸ್ಥಳೀಯ ಚುನಾವಣಾಧಿಕಾರಿಗಳು ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.. ಇನ್ನೂ ಮೋದಿ ಸರ್ಕಾರದ ಅವಧಿ ಅಧಿಕೃತವಾಗಿ ಮೇ ಅಂತ್ಯಕ್ಕೆ ಕೊನೆಗಳ್ಳಲಿದೆ. ಈ ಅವಧಿಯಲ್ಲಿ ಸರ್ಕಾರಗಳು ಯಾವುದೇ ರೀತಿಯ ಹೊಸ ಯೋಜನೆಗಳನ್ನು, ಯಾವುದೇ ಪ್ರಮುಖ ನಿರ್ಧಾರಗಳನ್ನು ಘೋಷಣೆಗಳನ್ನು ಮಾಡುವಂತಿಲ್ಲ ಎಂದು ಆಯೋಗ ತಾಕೀತು ಮಾಡಿದೆ. ಸದ್ಯವಿರುವ 16ನೆಯ ಲೋಕಸಭೆಯ ಅವಧಿ ಜೂನ್ 3ಕ್ಕೆ ಮುಕ್ತಾಯಗೊಳ್ಳಲಿದೆ. ಈ ಅವಧಿಯ ಒಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡು, ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರುವ ಅಗತ್ಯವಿದೆ ಎಂದರು.
C News TV Kannada News Online in cnewstv