Breaking News

ಯುಗ ಯುಗ ಕಳೆದರೂ ಯುಗಾದಿ ಮರಳಿ ಬರುತಿದೆ..

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳ ಪರಂಪರೆಯೇ ಇದೆ. ಈ ಸಾಲು ಸಾಲು ಹಬ್ಬಗಳಲ್ಲಿ ಮೊದಲನೇಯದೇ ಯುಗಾದಿ. ಯುಗಾದಿ ಅಂದರೆ ಹೊಸ ವರ್ಷದ ಮೊದಲ ದಿನ ಎಂದರ್ಥ.ಹಬ್ಬಗಳಲ್ಲಿ ಶ್ರೇಷ್ಠವಾದ ಪ್ರಸಿದ್ಧವಾದ ಯುಗಾದಿ ಹಬ್ಬ ಚ್ಯೆತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಂದು ಬರುತ್ತದೆ. ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ‘ಯುಗಾದಿ’ ಎಂಬ ಪದವಾಗಿದೆ. ಜೊತೆಗೆ ಬ್ರಹ್ಮ ದೇವನು ಆ ದಿನದಿಂದಲೇ ಸೃಷ್ಟಿಯ ಕಾರ್ಯ ಆರಂಭಿಸಿದನೆಂಬ ನಂಬಿಕೆಯೂ ಇದೆ. ಋತುಗಳು, ಗ್ರಹಗಳು, ನಕ್ಷತ್ರಗಳು ಈ ದಿನ ಸೃಷ್ಟಿ ಆಯಿತು ಎನ್ನುವ ನಂಬಿಕೆಯೂ ಇದೆ. ಯುಗಾದಿ ಹಬ್ಬವನ್ನು ಭಾರತ ಪರ್ವದಲ್ಲಿ ಬೇರೆ-ಬೇರೆ ಹೆಸರಿನಿಂದ, ಸಾಮಾನ್ಯವಾಗಿ ಎಲ್ಲರೂ ಆಚರಿಸುವರು. ಈ ಹಬ್ಬವನ್ನು ಹೆಚ್ಚಾಗಿ ಕರ್ನಾಟಕ ಆಂಧ್ರ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಾಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಾಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.

ಯುಗಾದಿಯ ಬೇವು-ಬೆಲ್ಲದ ವಿಶೇಷತೆ….

 

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ.

ಬೇವು – ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ:

ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ|
ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ|| – ಅದರರ್ಥ ಹೀಗಿದೆ – ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ.

 

ಇತಿಹಾಸದಲ್ಲಿ ಯುಗಾದಿ…

ದಕ್ಷಿಣ ಭಾರತವನ್ನು ಆಳಿದ ಶಾಲಿವಾಹನನು ಚೈತ್ರಶುದ್ಧ ಪಾಡ್ಯಮಿಯಂದು ಶಾಲಿವಾಹನ ರಾಜ ಸಿಂಹಾಸನಾರೂಢನಾದನೆಂದೂ, ಆಗಿನಿಂದ ಶಾಲಿವಾಹನ ಶಕೆ ಆರಂಭವಾಯಿತೆಂದೂ ಹೇಳಲಾಗುತ್ತದೆ. ಹಿಂದುಗಳು ಶಾಲಿವಾಹನ ಶಕೆಯ ಸಂವತ್ಸರಗಳನ್ನಾಧರಿಸಿ ಆಯಾ ಸಂವತ್ಸರವನ್ನು ಚೈತ್ರ ಮಾಸದ ಪ್ರತಿಪದೆಯಿಂದ ಆರಂಭಿಸುವರು. ಯುಗಾದಿಯು ಚಂದ್ರಮಾನದ ಸಂವತ್ಸರದ ಆರಂಭದ ದಿನ.

ವರಾಹಮಿಹಿರಾಚಾರ್ಯನು ವರ್ಷಾರಂಭವನ್ನು ಚೈತ್ರ ಮಾಸವೆಂದು ಹೇಳಿರುವನು. ಪಂಚಾಂಗ ಮತ್ತು ಶಾಸ್ತ್ರದ ಪ್ರಕಾರ ಶುಭದಿನ ಹಾಗೂ ಅತ್ಯಂತ ಶುಭ ಮೂಹೂರ್ತದ ಮೂರುವರೆ ದಿನಗಳೆಂದರೆ ಯುಗಾದಿ, ವಿಜಯದಶಮಿ, ಬಲಿಪಾಡ್ಯಮಿ ಮತ್ತು ಅಕ್ಷಯ ತದಿಗೆ. ಅದರಲ್ಲಿ ಯುಗಾದಿ ಅತೀಶ್ರೇಷ್ಠ ಮೂಹೂರ್ತ ಎಂದು ಭಾರತಿಯರು ನಂಬುತ್ತಾರೆ. ವರ್ಷದ ಶುಭ ದಿನವಾದ ಯುಗಾದಿ ಮಂಗಳ ಕಾರ್ಯವನ್ನು ಮಾಡಲು ಯೋಗ್ಯ ದಿನವೆಂದು ಹೇಳುವರು.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments