ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಘಟನೆಯಲ್ಲಿ 14 ಮಂದಿ ಬಲಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಿದೆ. ಶುಕ್ರವಾರ ಬೆಳಗ್ಗೆ ಕ್ವೆಟ್ಟಾ ನಗರದ ತರಕಾರಿ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. 14 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಮೃತರಲ್ಲಿ ಕನಿಷ್ಠ ಏಳು ಮಂದಿ ಕ್ವೆಟ್ಟಾದ ಹಜರಿಗಂಜ್ ಪ್ರದೇಶದ ನಿವಾಸಿಗಳಾಗಿದ್ದಾರೆ. ಇದು ಬಲೂಚಿಸ್ಥಾನದ ಪ್ರಾಂತೀಯ ರಾಜಧಾನಿಯಾಗಿದ್ದು ಇಲ್ಲಿ ಹಜಾರ ಸಮುದಾಯದವರು ವಾಸಿಸುತ್ತಿದ್ದಾರೆ. ಬಾಂಬ್ ಸ್ಫೋಟದ ತೀವ್ರತರವಾದ ತರಕಾರಿ ಮಾರುಕಟ್ಟೆಯ ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೆ ಹಾನಿ ಉಂಟಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಲಭ್ಯವಿದೆ ಎಂದು ಗಾಯಾಳುಗಳಿಗೆ ವಿವಿಧ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ..
Recent Comments