Breaking News

ನಾಳೆಯಿಂದ ಜಿಲ್ಲೆಯಲ್ಲಿ ಮೈತ್ರಿ ನಾಯಕರ ಘರ್ಜನೆ

 

ಬಹಿರಂಗ ಪ್ರಚಾರಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇರುವುದರಿಂದ ಎಲ್ಲಾ ಪಕ್ಷದಲ್ಲೂ ಸಹ ಚುನಾವಣಾ ಪ್ರಚಾರದ ಕಾವು ರಂಗೇರಿದೆ ..

ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ  ಎರಡು ಪಕ್ಷದ ಮುಖಂಡರಾದ ಡಿ.ಕೆ. ಶಿವಕುಮಾರ್, ಸಾ ರಾ ಮರೇಶ್, ಡಿ.ಸಿ.ಭಾರತ, ಡಿ.ಕೆ.ಸುರೇಶ್, ಡಾ. ರಂಗನಾಥ್, ತನ್ವೀರ್, ನಾರಾಯಣ ಮತ್ತಿತರ ನಾಯಕರುಗಳು ಅಗಮಿಸಿ, ಕ್ಷೇತ್ರದ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ತಿಳಿಸಿದ್ದಾರೆ
.

ಪ್ರಚಾರದಲ್ಲಿ ಹೆಚ್ ಡಿ ದೇವೇಗೌಡ:

ಏಪ್ರಿಲ್ 20 ರಂದು ಬೆಳಗ್ಗೆ 11 ಗಂಟೆಗೆ  ತೀರ್ಥಹಳ್ಳಿ ಮತ್ತು ಭದ್ರಾವತಿ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಎರಡು ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಮತ್ತು ಇತರ ನಾಯಕರು ಭಾಗವಹಿಸುವರು.

Leave a Reply

Your email address will not be published. Required fields are marked *

*