ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದೆ ಎನ್ನುವಾಗಲೇ ಭದ್ರಾವತಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಇಂದು ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಮಗ ಅಜಿತ್ ಗೆ ಸೇರಿದ ಎಚ್.ಪಿ.ಪೆಟ್ರೋಲ್ ಬಂಕ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು,
ಪೆಟ್ರೋಲ್ ಬಂಕ್ ನಲ್ಲಿರುವ ಹಣ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ…
ದಾಳಿ ವೇಳೆ 8 ಲಕ್ಷ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಜಿತ್ ಬಳಿ 1.39 ಲಕ್ಷ ರೂಪಾಯಿ ದಾಖಲೆ ಇಲ್ಲದ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಅಜಿತ್ ಗೆ ಸೇರಿದ ಪೆಟ್ರೋಲ್ ಬಂಕ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳೆ ವೇಳೆ ಸಿಕ್ಕ ಹಣಕ್ಕೆ ಸಂಬಂಧಿಸಿದಂತೆ ದಾಖಲೆಗಳು ಸರಿಹೊಂದದ ಹಿನ್ನೆಲೆಯಲ್ಲಿ ಹಣ ವಶಕ್ಕೆ ಪಡೆದಿರುವ ಐಟಿ ಅಧಿಕಾರಿಗಳು.ಸೂಕ್ತ ದಾಖಲೆಗಳನ್ನು ನೀಡಿ ಹಣ ವಾಪಸ್ ಪಡೆಯುವಂತೆ ಸೂಚನೆ ನೀಡಿದಾರೆ.
Recent Comments