Breaking News

ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು.

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು.

ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು.


ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಮತ ಚಲಾಯಿಸಿದರು.

 

ಮಾಜಿ ಸಭಾಪತಿ ಡಿ.ಹೆಚ್.ಶಂಕರ ಮೂರ್ತಿ  ಹಾಗೂ ಕುಟುಂಬಸ್ಥರು ಬಸವನಗುಡಿಯಲ್ಲಿ ಮತ ಚಲಾಯಿಸಿದರು.

ಮಾಜಿ ಶಾಸಕ ಕೆ ಬಿ ಪ್ರಸನ್ನಕುಮಾರ್ ಹಾಗೂ ಕುಟುಂಬಸ್ಥರು ಅಶೋಕ ನಗರದಲ್ಲಿ ಮತ ಚಲಾಯಿಸಿದರು.

 

ಆರ್ ಕೆ ಸಿದ್ದರಾಮಣ್ಣ ಮತ್ತು ಅವರ ಕುಟುಂಬದವರು ಹರಳೆಣ್ಣೆ ಕೇರಿಯ ದೊಡ್ಡ ಪೇಟೆ ಸರ್ಕಾರಿ ಶಾಲೆಯ ಆವರಣದಲ್ಲಿ ಮತ ಚಲಾಯಿಸಿದರು.

ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ಹಾಗೂ ಕುಟುಂಬಸ್ಥರು ಮತ ಚಲಾಯಿಸಿದರು..

ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಎಸ್ ರುದ್ರಗೌಡ ಹಾಗೂ ಕುಟುಂಬಸ್ಥರು ವೆಂಕಟೇಶ್ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು..

ವಿಧಾನಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ಹಾಗೂ ಕುಟುಂಬಸ್ಥರು ಹೊಸ ಮನೆಯಲ್ಲಿ ಮತ ಚಲಾಯಿಸಿದರು..

ಬಸವ ಕೇಂದ್ರದ ಶ್ರೀ ಬಸವ ಮರುಳಸಿದ್ಧ ಮಹಾಸ್ವಾಮಿಗಳು ವೆಂಕಟೇಶ್ ನಗರದಲ್ಲಿ ಮತ ಚಲಾಯಿಸಿದರು.

ಜೆಡಿಎಸ್ ಪಕ್ಷದ ಮುಖಂಡರಾದ ಶ್ರೀಕಾಂತ್ ಮತ ಚಲಾಯಿಸಿದರು.

Leave a Reply

Your email address will not be published. Required fields are marked *

*