ಶಿವಪ್ಪನಾಯಕನ ವೃತ್ತದ ಸುತ್ತಮುತ್ತಲು ಹೂ, ಹಣ್ಣು-ತರಕಾರಿಗಳನ್ನು ಮಾರಾಟ ಮಾಡುವುದರಿಂದ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಈ ಹಿಂದೆ ಮಾರಾಟ ಮಾಡಬೇಡಿ ಎಂದು ಪದೇಪದೇ ಹೇಳಿದರು ಸಹ ಮಾರಾಟ ಮಾಡುವುದನ್ನು ಬಿಟ್ಟಿಲ್ಲ. ಇದರಿಂದ ವಾಹನಗಳ ಸಂಚಾರಕ್ಕೆ ಹಾಗೂ ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಸಂಚಾರಕ್ಕೆ ಅಡ್ಡಿಯಾಗಿದೆ ವ್ಯಾಪಾರಸ್ಥರನ್ನು ತೆರವುಗೊಳಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ವ್ಯಾಪಾರಿಗಳ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪರಿಣಾಮವಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಯಿತು.
Recent Comments