Breaking News

ಜೀಪ್ ಹಾಗು ಸ್ಕೂಟಿ ನಡುವೆ  ಅಪಘಾತ ಸ್ದಳದಲೇ  ವಿದ್ಯಾರ್ಥಿನಿ ಸಾವು

ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜು ಹತ್ತಿರ ಭೀಕರ ಅಪಘಾತ ಸಂಭವಿಸಿದ್ದು 18 ವರ್ಷದ ಸುನೈನಾ ಎಂಬ  ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸುನೈನಾ ನಗರದ ಚನ್ನಪ್ಪ ಲೇಔಟ್ ನಿವಾಸಿಯಾಗಿದ್ದು, ಬೆಳಗ್ಗೆ ಟ್ಯೂಷನ್ ಮುಗಿಸಿಕೊಂಡು ಸ್ನೇಹಿತೆಯ ಮನೆಗೆ ಹೋಗುವಾಗ  ಈ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು  ಸಮೀಪದ ನಂಜಪ್ಪ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.
ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು..

Leave a Reply

Your email address will not be published. Required fields are marked *

*