Breaking News

ಪವಿತ್ರ ರಂಜಾನ್ ಆಚರಣೆ

ಶಿವಮೊಗ್ಗ: ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಶಿವಮೊಗ್ಗ ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಅದರಲ್ಲೂ ಶಿವಮೊಗ್ಗ ನಗರದ ಈದ್ಗಾ ಮೈದಾನದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಏಕಕಾಲದಲ್ಲಿ ಪವಿತ್ರ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಅಪ್ಪಿಕೊಂಡು ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೊಸ ಬಟ್ಟೆ ಧರಿಸಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸುತ್ತಿದ್ದುದು ವಿಶೇಷವಾಗಿತ್ತು. ಪ್ರಾರ್ಥನೆ ಬಳಿಕ ಮುಸ್ಲಿಂ ಸಮುದಾಯದ ಬಡವರೂ ಹಬ್ಬವನ್ನು ಸಂತಸದಿಂದ ಆಚರಣೆ ಮಾಡಲಿ ಎಂದು ಉಳ್ಳವರು ದಾನ ಮಾಡುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು. ಶಿವಮೊಗ್ಗ ನಗರ ಮಾತ್ರವಲ್ಲದೆ ಶಿಕಾರಿಪುರ, ಸೊರಬ, ಭದ್ರಾವತಿ, ಸಾಗರ, ತೀರ್ಥಹಳ್ಳಿ, ಹೊಸನಗರ ತಾಲೂಕುಗಳಲ್ಲಿಯೂ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

Leave a Reply

Your email address will not be published. Required fields are marked *

*