Breaking News

ರಾಜುಗೌಡ ಅವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

 

 

 

 


ಶಿವಮೊಗ್ಗ: ಸುರಪುರದ ಶಾಸಕ ರಾಜುಗೌಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ರಾಜುಗೌಡ ಅಭಿಮಾನಿ ಬಳಗದ ಕಾರ್ಯಕರ್ತರು ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜುಗೌಡ ಅವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರಾಗಿದ್ದು ಅವರಿಗೆ ಸಚಿವ ಸ್ಥಾನ ನೀಡದೆ ಇರುವುದು ವಾಲ್ಮೀಕಿ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ರಾಜುಗೌಡ ಅವರು ವಾಲ್ಮೀಕಿ ಸಮುದಾಯವನ್ನು ಬಿಜೆಪಿ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೂ ರಾಜುಗೌಡ ಅವರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು‌..

 

Contact for advertisement / News 7676236690

Leave a Reply

Your email address will not be published. Required fields are marked *

*