Breaking News

ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರಸರ್ಕಾರ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಮೇಲೆ ತನಿಖಾ ಸಂಸ್ಥೆಗಳ ಮೂಲಕ ಒತ್ತಡ ಹಾಕುವ ಕೆಲಸ ಮಾಡುತ್ತಿದೆ. ಈಗಾಗಲೇ ಹಲವು ಕಾಂಗ್ರೆಸ್ ಮುಖಂಡರ ಮೇಲೆ ಕೇಂದ್ರ ಬಿಜೆಪಿ ಸರ್ಕಾರ ಒತ್ತಡ ಹೇರಿದೆ. ಕೇಂದ್ರ ಸರ್ಕಾರದ ಈ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್, ಪ್ರಮುಖರಾದ ದೇವೇಂದ್ರಪ್ಪ, ಸೌಗಂಧಿಕ ಇದ್ದರು

Leave a Reply

Your email address will not be published. Required fields are marked *

*