ಶಿವಮೊಗ್ಗ: ನೆರೆ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡಿಲ್ಲ ಎಂದು ಮಹಾನಗರ ಪಾಲಿಕೆಯ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ದಸರಾ ಆಚರಣೆ ಅಂಗವಾಗಿ ನಡೆದ ಪಾಲಿಕೆ ವಿಶೇಷ ಸಭೆಯ ಆರಂಭದಲ್ಲೇ ನೆರೆ ಸಂತ್ರಸ್ತರ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಮೊದಲು ನೆರೆ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡಿ. ಈಗ ನೀಡುತ್ತಿರುವ ಪರಿಹಾರದಲ್ಲೂ ಕೆಲವರು ಕಮಿಷನ್ ಪಡೆಯುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಸಂತ್ರಸ್ತರಿಗೆ ಪರಿಹಾರ ನೀಡುವ ಇಚ್ಛಾಶಕ್ತಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು..
C News TV Kannada News Online in cnewstv