
ಶಿವಮೊಗ್ಗ: ಮದ್ಯಪಾನ ಮಾಡಿ ಕಾರು ಚಾಲನೆ ಮಾಡುತ್ತಿದ್ದ ಚಾಲಕನೊಬ್ಬ ದೊಡ್ಡ ಮೊತ್ತದ ದಂಡ ಪಾವತಿಸಿದ್ದಾನೆ. ನೂತನ ವಾಹನ ಕಾಯ್ದೆ ಅಡಿ ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಹೌದು ಸಂಚಾರ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬರು ಬರೋಬ್ಬರಿ 12 ಸಾವಿರ ರೂ. ದಂಡ ತೆತ್ತಿದ್ದಾರೆ. ಶಿಕಾರಿಪುರದ ವ್ಯಕ್ತಿಯೊಬ್ಬರಿಗೆ ಶಿವಮೊಗ್ಗದ 3ನೇ ಜೆಎಂಎಫ್‌ಸಿ ನ್ಯಾಯಾಲಯವು 12 ಸಾವಿರ ರೂ. ದಂಡ ವಿಧಿಸಿದೆ.
ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಪ್ರಕರಣದಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ಸಂಚಾರ ಪೊಲೀಸರು ವಾಹನ ತಡೆದು ತಪಾಸಣೆ ಮಾಡಿದಾಗ ಮದ್ಯ ಸೇವಿಸಿದ್ದು ದೃಢಪಟ್ಟಿತ್ತು. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ರಾತ್ರಿ ಬಿಕ್ಕನಹಳ್ಳಿ ಬಳಿ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ತಡೆದು ತಪಾಸಣೆ ನಡೆಸಿದ್ದು, 180 ಮತ್ತು 183 ಕಾಲಂನಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಶುಕ್ರವಾರ ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಕುಡಿದು ವಾಹನ ಚಾಲನೆ ಮಾಡಿದ್ದಕ್ಕೆ 10 ಸಾವಿರ ರೂ. ಹಾಗೂ ಅಡ್ಡಾದಿಡ್ಡಿ ವಾಹನ ಚಲಾಯಿಸಿದ್ದಕ್ಕೆ 2 ಸಾವಿರ ರೂ. ದಂಡ ವಿಧಿಸಿದೆ..
C News TV Kannada News Online in cnewstv