Breaking News

ಸಚಿವ ನಾಗೇಶ್ ಅಣಕು ಶವಯಾತ್ರೆ.

ಶಿವಮೊಗ್ಗ :ಬಂಜಾರ ತಾಂಡಗಳ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ನಾಗೇಶ್ ವಿರುದ್ಧ ಶಿವಮೊಗ್ಗದಲ್ಲಿ ಭಾರಿ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಬಸ್ ನಿಲ್ದಾಣದಿಂದ ಗೋಪಿವೃತ್ತದವರೆಗೆ ಸಚಿವ ನಾಗೇಶ್ ಅವರ ಅಣಕು ಶವಯಾತ್ರೆ ನಡೆಸಿದ ಬಂಜಾರ ಸಮುದಾಯದವರು ಸಚಿವ ನಾಗೇಶ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಾಗೇಶ್ ಬಂಜಾರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಕಾರರು ತಮಟೆ, ಚಟ್ಟದೊಂದಿಗೆ ನಾಗೇಶ್ ಅವರ ಅಣಕು ಶವಯಾತ್ರೆ ನಡೆಸಿದರು. ಬಳಿಕ ಗೋಪಿ ವೃತ್ತದಲ್ಲಿ ನಾಗೇಶ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದರು. ಬಳಿಕ ನಾಗೇಶ್ ಹಾಗೂ ಸಿಎಂ ಯಡಿಯೂರಪ್ಪ ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ವಿರುದ್ಧ ಸ್ಪರ್ಧೆ ಮಾಡಿದ್ದ ವಿದ್ಯಾರ್ಥಿ ಸಂಘಟನೆಯ ವಿನಯ್ ರಾಜಾವತ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಂಜಾರ ಸಮಾಜದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

*