Breaking News

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆರೋಗ್ಯ ಶಿಬಿರ ಆಯೋಜನೆ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನಾರಾಯಣ ಹೃದಯಾಲಯ, ಸರ್ಜಿ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳ ಸಹಯೋಗದೊಂದಿಗೆ ನಗರ ಬಿಜೆಪಿ ಆಯೋಜಿಸಿದ್ದ ಆರೋಗ್ಯ ಶಿಬಿರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಂಸದ ರಾಘವೇಂದ್ರ, ಪ್ರಪಂಚ ಕಂಡ ಅಪ್ರತಿಮ ನಾಯಕ ಪ್ರಧಾನಿ ಮೋದಿಯವರು. ಅವರ ಜನ್ಮದಿನದ ಅಂಗವಾಗಿ ನಮ್ಮ ಸಂಘಟನೆ ರಾಷ್ಟ್ರಾಧ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಪ್ರದಾನಿ ಮೋದಿಯವರು ಜನ ಸಾಮಾನ್ಯರ ಕಷ್ಟಗಳನ್ನು ಅರಿತಿದ್ದು, ಅವರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದರು. ಇದಕ್ಕೂ ಮುನ್ನ ಮೋದಿ ಹುಟ್ಟುಹಬ್ಬದ ಅಂಗವಾಗಿ ಸೇವಾ ಸಪ್ತಾಹ ವಿಷಯದಡಿ ವಿನೋಬನಗರದ ತರಕಾರಿ ಮಾರುಕಟ್ಟೆಯಲ್ಲಿ ಸ್ವಚ್ಚತಾ ಅಭಿಯಾನ ಕೂಡ ನಡೆಸಲಾಯಿತು.

Leave a Reply

Your email address will not be published. Required fields are marked *

*