ಶಿವಮೊಗ್ಗ: ಸಿಎಂ ಯಡಿಯೂರಪ್ಪ ಅವರ ಸರ್ಕಾರದಲ್ಲಿ ತಮ್ಮ ಹಸ್ತಕ್ಷೇಪದ ಆರೋಪವನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ನಿರಾಕರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರ ಪುತ್ರನಾದರೂ ನಾನೊಬ್ಬ ಜನಪ್ರತಿನಿಧಿ. ಹಾಗೆಯೇ ವಿಜಯೇಂದ್ರ ಬಿಜೆಪಿ ಕಾರ್ಯಕರ್ತನಾಗಿ ದ್ದರಿಂದ ಸಹಜವಾಗಿಯೇ ಜನರು ಕೆಲಸ ಅಪೇಕ್ಷಿಸಿ ಬರುತ್ತಾರೆ. ನಾವು ಕಾರ್ಯಕರ್ತರಾಗಿ ಕೆಲಸ ಮಾಡುತ್ತೇವೆ ಅಷ್ಟೇ…. ಅಷ್ಟೇ ಹೊರತು ಪಡಿಸಿ ಅಧಿಕಾರ ದಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ ಎಂದರು. ಸುಪ್ರೀಂ ಕೋರ್ಟ್ ನಲ್ಲಿಂದು ಬಿಎಸ್ವೈ ಆಸ್ತಿ ದುಪ್ಪಟ್ಟು ಪ್ರಕರಣದ ಅರ್ಜಿ ವಿಚಾರಣೆ ವಿಚಾರ ನಡೆಯುತ್ತಿದ್ದು, ಕಾನೂನು ತನ್ನ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಸಂಸದ ನಾರಾಯಣ ಸ್ವಾಮಿ ಯನ್ನು ದಲಿತ ಎಂಬ ಕಾರಣಕ್ಕೆ ಗ್ರಾಮಕ್ಕೆ ಸೇರಿಸದ ವಿಷಯದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಆದರೆ ಇಂತಹ ಘಟನೆ ನಡೆಯಬಾರದು. ಇದು ಯಾರು ಮಾಡಿದರೂ ತಪ್ಪೆ ಎಂದ ಸಂಸದರು, ಸಂಚಾರಿ ನಿಯಮ ಉಲ್ಲಂಘನೆ ದಂಡದ ಪ್ರಮಾಣ ರಾಜ್ಯ ಸರ್ಕಾರ ಕಡಿತಗೊಳಿಸಲಿದೆ ಎಂದು ಹೇಳಿದರು.
- ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ...
- ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ ...
- ಮಾಜಿ ನಗರಸಭಾ ಅಧ್ಯಕ್ಷರಾದ N J ರಾಜಶೇಖರ್ ಇನ್ನಿಲ್ಲ ...
- ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕರವೇ ಕಿರಣ್ ನೇಮಕ ...
- ಕುವೆಂಪು ವಿಶ್ವವಿದ್ಯಾಲಯದ ಪ್ರವೇಶಾತಿಗೆ ಅವಧಿ ವಿಸ್ತರಣೆ. ...
- ದಸರಾ ಚಲನಚಿತ್ರೋತ್ಸವ… ...
- ಬೆಳ್ಳಿ ಅಂಬಾರಿಯ ಜಂಬೂಸವಾರಿಗೆ ಶಿವಪ್ಪನಾಯಕ ಅರಮನೆಯಲ್ಲಿ ಸಕಲ ಸಿದ್ಧತೆ ...
- ನವರಾತ್ರಿ ಸಂಭ್ರಮ.. ...
- ಶಿವಮೊಗ್ಗ ದಸರಾಕ್ಕೆ ಸಕ್ರೆಬೈಲಿನ ಮೂರು ಆನೆಗಳಿಗೆ ವಿಶೇಷ ಆಹ್ವಾನ: ಅಂಬಾರಿ ಹೊರಲು ಸಾಗರಗೆ ತಾಲೀಮು ...
- ಶಿವಮೊಗ್ಗದಲ್ಲಿ ನ್ಯೂಸ್ 18 ಕನ್ನಡ ವಾಹಿನಿಯ ಕರುನಾಡ ಹಬ್ಬ ಕರುನಾಡ ಹಬ್ಬಕ್ಕೆ ನಿಮ್ಮ ಸಿ ನ್ಯೂಸ್ ಸಾಥ್! ...
Recent Comments