ಶಿವಮೊಗ್ಗ: ಬ್ಯಾಂಕ್ ನಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲ ಎಂದರೆ ಬ್ಯಾಂಕ್ ನವರು ದಂಡ ಹಾಕುತ್ತಾರೆ. ಆದರೆ ಬ್ಯಾಂಕ್ ನಲ್ಲಿ ಡಿಪಾಸಿಟ್ ಇಟ್ಟಿರುವ ಹಣವನ್ನು ಬಿಡಿಸಿಕೊಳ್ಳಲು ಹೋದರೆ ಆ ಹಣವನ್ನು ಗ್ರಾಹಕರಿಗೆ ಕೊಡಲು ಸಾಧ್ಯವಿಲ್ಲ ಎನ್ನುವುದು ಎಷ್ಟರಮಟ್ಟಿಗೆ ಸರಿ. ಇಂಥದ್ದೊಂದು ಸಂದಿಗ್ಧ ಸ್ಥಿತಿಗೆ ಪಂಜಾಬ್ ಅಂಡ್ ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ಬಂದು ತಲುಪಿಗೆ. ಹೌದು ಇಂದು ಬೆಳಗ್ಗೆ ಈ ಬ್ಯಾಂಕ್ ನ ಗ್ರಾಹಕರಿಗೆ ಅಚ್ಚರಿ ಕಾದಿತ್ತು. ಬ್ಯಾಂಕ್ ನಲ್ಲಿ ತಾವು ಇಟ್ಟಿರುವ ಹಣದಲ್ಲಿ ತಮಗೆಷ್ಟು ಬೇಕೋ ಅಷ್ಟನ್ನು ಬಿಡಿಸಿಕೊಳ್ಳಲು ಹೋದ ಗ್ರಾಹಕರಿಗೆ ಬ್ಯಾಂಕ್ ಸಿಬ್ಬಂದಿ ಕೇವಲ ಒಂದು ಸಾವಿರ ರೂಪಾಯಿಯನ್ನು ಮಾತ್ರ ಒಂದು ದಿನಕ್ಕೆ ಬಿಡಿಸಿಕೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಹಕರು ಬ್ಯಾಂಕ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು. ಇದರಿಂದಾಗಿ ಬ್ಯಾಂಕ್ ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬ್ಯಾಂಕ್ ನ ಆಡಳಿತದಲ್ಲಿ ಯಾವುದೋ ಒಂದು ಆಡಳಿತಾತ್ಮಕ ಸಮಸ್ಯೆಯಾಗಿದ್ದರಿಂದ ರಿಸರ್ವ್ ಬ್ಯಾಂಕ್ ಪಂಜಾಬ್ ಮಹಾರಾಷ್ಟ್ರ ಬ್ಯಾಂಕ್ ನ ಎಲ್ಲ ಶಾಖೆಗಳಿಗೂ ನೋಟೀಸ್ ನೀಡಿ ಗ್ರಾಹಕರು ಡಿಪಾಸಿಟ್ ಇಟ್ಟಿರುವ ಹಣವನ್ನು ವಾಪಸ್ ನೀಡಬಾರದು ಹಾವೂ ಗ್ರಾಹಕರಿಗೆ ದಿನಕ್ಕೆ ಗರಿಷ್ಟ ಒಂದು ಸಾವಿರ ರೂಪಾಯಿ ಮಾತ್ರ ನೀಡಬೇಕು ಎಂದು ನೋಟೀಸ್ ನಲ್ಲಿ ನಮೂದಿಸಿರುವುದು ಈ ಎಲ್ಲ ಗೊಂದಲಗಳಿಗೆ ಕಾರಣವಾಗಿದೆ..
C News TV Kannada News Online in cnewstv