ಶಿವಮೊಗ್ಗ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಶಿಕಾರಿಪುರದಲ್ಲಿ ಈ ಕುರಿತು ಹೇಳಿಕೆ ನೀಡಿರುವ ಸಿಎಂ ಈ ಕುರಿತು ಅಮಿತ್ ಷಾ ಸೇರಿದಂತೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದೇನೆ. ಇದಕ್ಕೆ ವರಿಷ್ಟರೂ ಒಪ್ಪಿಗೆ ಸೂಚಿಸಿದ್ದಾರೆ. ಅನರ್ಹ ಶಾಸಕರನ್ನು ಗೆಲ್ಲಿಸಬೇಕಾದ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಎಲ್ಲ ನಾಯಕರ ಮೇಲಿದೆ. ಇದಕ್ಕಾಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಇಬ್ಬಿಬ್ಬರು ಉಸ್ತುವಾರಿಗಳನ್ನು ಈಗಾಗಲೇ ನೇಮಿಸಲಾಗಿದೆ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಸಂಬಂಧ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದರು. ಕಳೆದ ಚುನಾವಣೆಯಲ್ಲಿ ಇದೀಗ ಅನರ್ಹ ಶಾಸಕರಾಗಿರುವವರ ವಿರುದ್ಧ ಕಡಿಮೆ ಮತಗಳಿಂದ ಸೋತಿದ್ದ ಬಿಜೆಪಿ ನಾಯಕರಿಗೆ ನಿಗಮಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು. ಈ ಕುರಿತು ಮುಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಹೇಳುವ ಮೂಲಕ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೂ ಯಡಿಯೂರಪ್ಪ ಮುಂದಾಗಿದ್ದಾರೆ
C News TV Kannada News Online in cnewstv