Breaking News

ಹುತಾತ್ಮರ ದಿನಾಚರಣೆ

ಶಿವಮೊಗ್ಗ: ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಕರ್ತವ್ಯದ ವೇಳೆ‌ ಹುತಾತ್ಮರಾದ ಪೊಲೀಸರಿಗೆ ಹುತಾತ್ಮರ‌ ಸ್ಮಾರಕಕ್ಕೆ ಪುಷ್ಪಗುಚ್ಛವನ್ನಿರಿಸಿ ನಮನ ಸಲ್ಲಿಸಲಾಯಿತು ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ, ಜಿಲ್ಲಾ‌ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು,‌ಎಎಸ್ ಪಿ ಶೇಖರ್ ಸ್ಮಾರಕಕ್ಕೆ ಹೂಚ್ಛವನ್ನಿಟ್ಟು ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಸಂದರ್ಭದಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸರ ಸೇವೆಯನ್ನು ಪ್ರತಿಯೊಬ್ಬರೂ ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು. ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ರಕ್ಷಣೆ ಮಾಡುವಾಗ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸರ ಸ್ಮರಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕಾಪಾಡಲು ನಿರಂತರ ಶ್ರಮ ವಹಿಸುವ ಪೊಲೀಸರಿಗೆ ಎಲ್ಲರೂ ಗೌರವ ನೀಡಬೇಕು ಎಂದು ಹೇಳಿದರು.

Leave a Reply

Your email address will not be published. Required fields are marked *

*