Breaking News

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

 

ಶಿವಮೊಗ್ಗ ನಗರದಲ್ಲಿ‌  ಇಂದು ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಶಿವಮೊಗ್ಗ ನಗರದ ಹಲವು ಬಡಾವಣೆಗಳು ಸಂಪೂರ್ಣ ಜಲಾವೃತಗೊಂಡಿವೆ. ಶಿವಮೊಗ್ಗದ ಬಾಪೂಜಿ ನಗರದ ನೂರಕ್ಕೂ ಹೆಚ್ಷು ಮನೆಗಳಿಗೆ ನಿನ್ನೆ ರಾತ್ರಿಯೂ ನೀರು ನುಗ್ಗಿತ್ತು. ಮಧ್ಯಾಹ್ನದ ವೇಳೆಗೆ ಮನೆಯನ್ನು ಶುಚಿಯಾಗಿಸಿಕೊಳ್ಳಲಾಗಿತ್ತು. ಆದರೆ ಇಂದು ಸಂಜೆ ಮತ್ತೆ ಧಾರಾಕಾರ ಮಳೆಯಾಗಿರುವುದರಿಂದ ಬಾಪೂಜಿ ನಗರ ಮತ್ತೆ ಜಲಾವೃತವಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಬಡಾವಣೆಯಾಗಿರುವ ಗೋಪಾಲಗೌಡ ಬಡಾವಣೆಯ ರಸ್ತೆಗಳ ಮೇಲೆ ಮೂರು ಅಡಿಗೂ ಹೆಚ್ಚು ನೀರು ತುಂಬಿಕೊಂಡಿತ್ತು. ಇನ್ನು ಕಾಂಗ್ರೆಸ್ ಕಚೇರಿ ಎದುರಿನ ‌ರಸ್ತೆ ಮೇಲೆ ಮೂರು ಅಡಿಗೂ ಹೆಚ್ಚು ನೀರ ಹರಿಯುತ್ತಿದ್ದ ಪರಿಣಾಮ ದ್ವಿಚಕ್ರವಾಹನಗಳು ಕೊಚ್ಚಿಕೊಂಡು ಹೋಗಿದ್ದವು. ಶಿವಮೊಗ್ಗ ಬೈಪಾಸ್ ರಸ್ತೆಯ ಮೇಲೆಯೂ ಬರೋಬ್ಬರಿ ಎರಡು ಅಡಿ ನೀರು ಹರಿಯುತ್ತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಇದೇ ರೀತಿ ಮಳೆ ಮುಂದುವರಿದಲ್ಲಿ ಶಿವಮೊಗ್ಗ ನಗರದಲ್ಲಿ ಹೆಚ್ಚಿನ‌ಹಾನಿ ಸಂಭವಿಸುವುದರಲ್ಲಿ ಅನುಮಾನವೇ ಇಲ್ಲ.

Leave a Reply

Your email address will not be published. Required fields are marked *

*