ಶಿವಮೊಗ್ಗ: ಅಯೋಧ್ಯೆ ಅಂತಿಮ ತೀರ್ಪು ಇಂದು ಹೊರಬರಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವುದರಿಂದಾಗಿ ಪೊಲೀಸರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ನಾಳೆ ಈದ್ ಮಿಲಾದ್ ಹಬ್ಬದಆಚರಣೆಗಾಗಿ ಮುಸ್ಲಿಂ ಸಮುದಾಯದವರು ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ವೇದಿಕೆ ಸೇರಿದಂತೆ ಟಿಪ್ಪು ಹಾಗೂ ಹಸಿರು ಬಾವುಟಗಳನ್ನು ಕಟ್ಟಿದ್ದರು. ಅಷ್ಟರಲ್ಲಾಗಲೇ ಸುಪ್ರೀಂ ಕೋರ್ಟ್ ಇಂದೇ ತೀರ್ಪು ನೀಡುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ಅಮೀರ್ ಅಹಮದ್ ವೃತ್ತದಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
