Breaking News

ಕಾಂಗ್ರೆಸ್ ದಿವಾಳಿಯಾಗಿದೆ

ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ದಿವಾಳಿಯಾಗಿದೆ. ದಿವಾಳಿಯಾಗಿರುವುದನ್ನು ಸರಿಪಡಿಸಿಕೊಳ್ಳುವ ಉದ್ದೇಶದಿಂದ ಪೌರತ್ವ ವಿಧೇಯಕ ತಿದ್ದುಪಡಿ ಮಸೂದೆ ವಿಷಯವನ್ನಿಟ್ಟುಕೊಂಡು ದೇಶದಲ್ಲಿ ಗಲಭೆ ಎಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವ ವಿರೋಧಿಯಾಗಿ ಅಧಿಕಾರ ನಡೆಸುತ್ತದೆ. ಅಧಿಕಾರ ಇಲ್ಲದಿರುವಾಗ ಗಲಭೆ ಎಬ್ಬಿಸುವ ಕೆಲಸ ಮಾಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ವಿಧೇಯಕವನ್ನು ಖಂಡಿಸಿ ದೇಶದ ಯಾವೊಬ್ಬ ಮುಸ್ಲಿಮನೂ ಪ್ರತಿಭಟನೆ ನಡೆಸುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಈ ವಿಷಯವನ್ನಿಟ್ಟುಕೊಂಡು ಗಲಭೆ ಎಬ್ಬಿಸುವ ಮೂಲಕ ರಾಜಕೀಯ ತಂತ್ರಗಾರಿಕೆ ಮಾಡುತ್ತಿದೆ ಎಂದು ನಳೀನ್ ಕುಮಾರ್ ಕಟೀಲು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

*