Breaking News

ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಾಸಕ ಸೋಮಶೇಖರ ರೆಡ್ಡಿ ಅವರು ಮುಸ್ಲಿಮ್ ಸಮುದಾಯವನ್ನು ಅವಹೇಳನ ಮಾಡುವಂತ ಹೇಳಿಕೆ ನೀಡಿದ್ದು ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆಪಡೆದರು. ಸೋಮಶೇಖರ ರೆಡ್ಡಿ ಅವರು ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವಂಥ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ದೂರು ದಾಖಲಾಗಿದ್ದರೂ ಇನ್ನೂ ಅವರನ್ನು ಬಂಧಿಸಿಲ್ಲ. ಯಡಿಯೂರಪ್ಪ ಅವರೇ ಸೋಮಶೇಖರ ರೆಡ್ಡಿ ಅವರ ರಕ್ಷಣೆಗೆ ನಿಂತಿದ್ದಾರೆ ಎಂಬ ಅನುಮಾನ ಮೂಡಲಾರಂಭಿಸಿದೆ. ಕೂಡಲೇ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು. ಪ್ರತಿಭಟನಕಾರರು ವಿನೋಬನಗರದಲ್ಲಿರುವ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಬಹುದು ಎಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆಪಡೆದು ಸ್ವಲ್ಪ ಸಮಯದ ಬಳಿಕ ಬಿಡುಗಡೆ ಮಾಡಿದರು.

Leave a Reply

Your email address will not be published. Required fields are marked *

*