ಶಿವಮೊಗ್ಗ: ರಾಜ್ಯ ಸರ್ಕಾರ ಕೇವಲ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ ಟಾಪ್ ನೀಡುವ ಮೂಲಕ ಇತರೆ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಎನ್ ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಳೆದ ವರ್ಷ ಕಾರಣಾಂತರಗಳಿಂದ ಸರ್ಕಾರ ಲ್ಯಾಪ್ ಟಾಪ್ ವಿತರಿಸಿರಲಿಲ್ಲ. ಆದರೆ ಈ ಬಾರಿ ಸರ್ಕಾರ ಲ್ಯಾಪ್ ಟಾಪ್ ವಿತರಿಸಲು ಮುಂದಾಗಿದೆಯಾದರೂ ಅದು ಕೇವಲ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಾತ್ರ. ಇದರಿಂದಾಗಿ ದ್ವಿತೀಯ ಹಾಗೂ ತೃತೀಯ ಪದವಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಕೂಡಲೆ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಿಸಲು ಮುಖ್ಯಮಂತ್ರಿಗಳು ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
C News TV Kannada News Online in cnewstv