Breaking News

ಐಷಾರಾಮಿ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸುಟ್ಟು ಕರಕಲಾದ ಪೀಠೋಪಕರಣ ಹಾಗೂ ದಾಖಲೆಗಳು.

ಶಿವಮೊಗ್ಗ: ಮನೆಯ ಎಸಿಯಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶಿವಮೊಗ್ಗದ ಶ್ರೀಮಂತ ಕುಟುಂಬದ ಮನೆಯೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ನಡೆದಿದೆ. ಭೂಪಾಳಂ ಸತ್ಯನಾರಾಯಣ ಅವರಿಗೆ ಸೇರಿದ ಮನೆಯಲ್ಲಿ ಇಂದು ಬೆಳಗ್ಗೆ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು ಮನೆಯ ಮಹಡಿಯಲ್ಲಿದ್ದ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ಕೊಠಡಿಯಲ್ಲಿದ್ದ ಪೀಠೋಪಕರಣಗಳು, ದಾಖಲೆಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಅನಾಹುತವನ್ನು ತಪ್ಪಿಸಿದ್ದಾರೆ..

 

Leave a Reply

Your email address will not be published. Required fields are marked *

*