Breaking News

ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕಕ್ಕೆ ಆಗ್ರಹ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಸರ್ಕಾರಿ ಬಸ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿ ಎನ್ ಎಸ್ ಯುಐ ಕಾರ್ಯಕರ್ತರು ಶಿವಮೊಗ್ಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿವಮೊಗ್ಗದಿಂದ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದಾರೆ. ಖಾಸಗಿ ಬಸ್ ಪ್ರಯಾಣಕ್ಕಾಗಿ ವಿದ್ಯಾರ್ಥಿಗಳು ಪ್ರತಿ ತಿಂಗಳು 1500 ರೂಪಾಯಿ ವೆಚ್ಚ ಮಾಡಬೇಕಿದೆ. ಇದರಿಂದ ಬಡ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಈ ಮಾರ್ಗದಲ್ಲಿ ಸರ್ಕಾರಿ‌ ಬಸ್ ಗಳು ಸಂಚರಿಸಿದರೆ ವಿದ್ಯಾರ್ಥಿಗಳು 1500 ರೂಪಾಯಿ ನೀಡಿ ವಾರ್ಷಿಕ ಪಾಸ್ ಪಡೆದು ವರತಷ ಪೂರ್ತಿ ಓಡಾಡಬಹುದಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ವಾರ್ಷಿಕ 15000 ರೂಪಾಯಿ ಉಳಿತಾಯವಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ವಿಶ್ವವಿದ್ಯಾಲಯಕ್ಕೆ‌ ನರ್ಮ್ ಯೋಜನೆಯಡಿ ಸರ್ಕಾರಿ ಬಸ್ ಸೇವೆ ಒದಗಿಸಬೇಕು. ಇಲ್ಲದಿದ್ದಲ್ಲಿ ಎನ್ ಎಸ್ ಯುಐ ನಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಎನ್ ಎಸ್ ಯುಐ ಮುಖಂಡರಾಗ ಚೇತನ್, ಶ್ರೀಜಿತ್, ಬಾಲಾಜಿ, ವಿಜಯ್, ರವಿ ಮತ್ತಿತರರಿದ್ದರು.

Leave a Reply

Your email address will not be published. Required fields are marked *

*