ಶಿವಮೊಗ್ಗ: ಕರೋನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇದಾಜ್ಞೆ ಹೇರಿ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಎಲ್ಲಡೆಯೂ ಕರೋನಾ ಭೀತಿ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಇಂದಿನಿಂದ ಐದು ದಿನಗಳ ಕಾಲ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಲ್ಲೂ ಜನ ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದಲ್ಲದೆ ಫುಟ್ ಕೋರ್ಟ್, ಬಾರ್ ಅಂಡ್ ರೆಸ್ಟೋರೆಂಟ್ ಎಂದಿನಂತೆ ತೆರೆದಿರಲಿವೆ. ನಿಷೇದಾಜ್ಞೆ ಉಲ್ಲಂಘಿಸಿ ಯಾರಾದರೂ ಒಂದೆಡೆ ಸೇರಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಡಿಸಿ ಎಚ್ಚರಿಕೆ ನೀಡಿದರು.
C News TV Kannada News Online in cnewstv