ಜಿಲ್ಲೆಯಲ್ಲಿ ಪ್ರಯಾಣಿಕರ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತೊಳಿಸಲಾಗಿದೆ. ಗೂಡ್ಸ್ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ತಮ್ಮ ವಾಹನಗಳನ್ನು ಬಳಸಿಕೊಳ್ಳಬಹುದಾಗಿದೆ ಇನ್ನೂ ವಿದೇಶದಿಂದ ಬಂದವರ ಮೇಲೆ ನಿರಂತರ ನಿಗಾ ಇರಿಸಲಾಗಿದೆ. ಅವರು ಮನೆಯಿಂದ ಯಾವುದೇ ಕಾರಣಕ್ಕೂ ಹೊರಗೆ ಬಾರದಂತೆ ಸೂಚನೆಗಳನ್ನು ನೀಡಲಾಗಿದೆ. ಅಂತವರ ಮನೆಗಳನ್ನು ಗುರುತಿಸಲು ಪೋಸ್ಟರ್‍ಗಳನ್ನು ಹಚ್ಚಲು ಸೂಚಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ನಿಗಾ ಇರಿಸಿರುವ ಬಗ್ಗೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ. ಅಗತ್ಯ ಬಿದ್ದರೆ ನಿಗಾ ವಹಿಸಲು ಸಿಬ್ಬಂದಿ ನೇಮಕ ಮಾಡಲು ಸೂಚಿಸಲಾಗಿದೆ. ಹಾಗೂ ಬೆಂಗಳೂರಿನಿಂದ ನಿನ್ನೆ ಸುಮಾರು 500ಕ್ಕೂ ಹೆಚ್ಚು ಮಂದಿ ಜಿಲ್ಲೆಗೆ ಆಗಮಿಸಿದ್ದು, ಎಲ್ಲಾ ವಾಹನಗಳ ಸಂಖ್ಯೆ, ಪ್ರಯಾಣಿಕರ ಮೊಬೈಲ್ ಸಂಖ್ಯೆಗಳನ್ನು ಮುಂಜಾಗರೂಕತಾ ಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದರು.
Recent Comments