ಶಿವಮೊಗ್ಗ: ಕರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಇಡೀ ಇಂಡಿಯಾ ಲಾಕ್ ಡೌನ್ ಆಗಿದೆ. ಜೊತೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂಥ ಸಂದರ್ಭದಲ್ಲಿ ಇದುವರೆಗೆ ಯಾರಾದರೂ ಕಾನೂನು ಉಲ್ಲಂಘಿಸಿ ರಸ್ತೆಗೆ ಬಂದರೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದರು. ಆದರೆ ಇನ್ಮುಂದೆ ಪೊಲೀಸರು ಲಾಠಿ ರುಚಿ ತೋರಿಸುವುದಿಲ್ಲ. ಬದಲಿಗೆ ಅಂಥವರ ವಿರುದ್ಧ ಪ್ರಕರಣ ದಾಖಲಿಸುತ್ತಾರೆ. ಆಗ ಅನಿವಾರ್ಯವಾಗಿ ಜೈಲು ಸೇರಬೇಕಾಗುತ್ತದೆ. ಹೌದು ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿ ಸಕಾರಣವಿಲ್ಲದೆ ರಸ್ತೆಗೆ ಗುಂಪಾಗಿ ಬರುವವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾರಂಭಿಸಿದ್ದಾರೆ. ಶಿವಮೊಗ್ಗ ಗಾಂದಿ ಬಜಾರ್ ನಲ್ಲಿ ಕಾನೂನು ಉಲ್ಲಂಘಿಸಿ ಓಡಾಡುತ್ತಿದ್ದ ನಾಸಿಕ್, ರಿಜ್ವಾನ್ ಖಾನ್, ರಿಯಾಜ್ ಅಹಮದ್, ಆನಂದ ಎಂಬುವರ ವಿರುದ್ಧ ದೊಡ್ಡಪೇಟೆ ಠಾಣೆ ಪೊಲೀಸರು ಐಪಿಸಿ ಕಲಂ 188, 270 ಅಡಿ ಪ್ರಕರಣ ದಾಖಲು ಮಾಡಿದ್ದಾರೆ. ಇನ್ನು ಹೊಳೆಹೊನ್ನೂರು ಗ್ರಾಮದಲ್ಲಿ ಕಾನೂನು ಉಲ್ಲಂಘಿಸಿದವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಹೊಳೆಹೊನ್ನೂರು ಗ್ರಾಮದಲ್ಲಿ ನೇತ್ರಪ್ಪ, ದೇವಾ, ಪಾಪು, ವಿಶ್ವಾಸ, ಪ್ರಮೋದ ಎಂಬವರ ವಿರುದ್ಧ ಐಪಿಸಿ ಕಲಂ 188 ಹಾಗೂ 269 ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಇದಲ್ಲದೆ ಇಂದು ಬೆಳಗ್ಗೆ ಹನ್ನೊಂದು ಗಂಟೆ ವೇಳೆಗೆ ಶಿವಮೊಗ್ಗ ಅಮೀರ್ ಅಹಮದ್ ಸರ್ಕಲ್ ನಲ್ಲಿ ಮೂವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
C News TV Kannada News Online in cnewstv